ಎರಡು ವರ್ಷಗಳಿಂದ ಕೆಟ್ಟು ನಿಂತಿರುವ ಶುದ್ದ ಕುಡಿಯುವ ನೀರಿನ ಘಟಕ
ವರದಿ ವಿಲಿಯಂ ಮಾರ್ಟಳ್ಳಿ
ಹನೂರು :- ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶುದ್ಧ ನೀರಿನ ಘಟಕ ಕೆಟ್ಟು ನಿಂತಿದ್ದು, ಗ್ರಾಮಸ್ಥರು ಕುಡಿಯುವ ನೀರಿಗಾಗಿ ಪರಿತಪಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪಟ್ಟಣದ ಪ್ರದೇಶದ ನಾಗರಿಕರಂತೆ ಗ್ರಾಮೀಣ ಭಾಗದ ಜನರೂ ಸಹ ಆರೋಗ್ಯದ ದೃಷ್ಟಿಯಿಂದ ಶುದ್ಧ ಕುಡಿಯುವ ನೀರು ಕುಡಿಯಲೆಂದು ಸರ್ಕಾರ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಿದೆ. ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ನಿಂತು ಎರಡೂ ವರ್ಷ ಕಳೆದರೂ, ಯಾರೂ ಗ್ರಾಮದ ಕಡೆ ಮುಖ ಮಾಡಿಲ್ಲ. ನಮ್ಮಲ್ಲಿ ಸಪ್ಪೆ ನೀರು ಬರುವುದರಿಂದ ಅರೋಗ್ಯ ಕಾಪಾಡಿಕೊಳ್ಳಲು ಕುಡಿಯಲು ಶುದ್ಧ ನೀರನ್ನು ಬೇರೊಂದೆಡೆ ತರುವ
ಪರಿಸ್ಥಿತಿ ಎದುರಾಗಿದೆ. ಯಂತ್ರಗಳು ಕೆಟ್ಟಿರುವ ಬಗ್ಗೆ ಗ್ರಾಪಂಗೆ ದೂರು ನೀಡಿದರೂ, ಯಾವುದೇ
ಪ್ರಯೋಜನವಾಗಿಲ್ಲ. ಗ್ರಾಮ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ನಿರ್ಲಕ್ಷ್ಯ
ತೋರುತ್ತಿದೆ ಎಂದು ಗ್ರಾಮದ ಹಿರಿಯರು ಮಹಿಳೆಯರು ಆರೋಪಿಸಿದ್ದಾರೆ. ತಾಲೂಕಿನ ಹಲವು ಗ್ರಾಮಗಳಲ್ಲಿಯು ಕೂಡ ನಿರ್ಮಿಸಿರುವ ಶುದ್ಧ ನೀರಿನ ಘಟಕಗಳು ಕಾರ್ಯ ನಿರ್ವಹಿಸದಿರುವುದರಿಂದ ಗ್ರಾಮಸ್ಥರು ಕುಡಿಯುವ ನೀರಿಗಾಗಿ ಅಲೆದಾಡುವ
ಪರಿಸ್ಥಿತಿ ನಿರ್ಮಾಣವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ
ಕೆಟ್ಟು ನಿಂತಿರುವ ನೀರಿನ ಘಟಕಗಳನ್ನು ದುರಸ್ತಿಪಡಿಸಿ ಸಾರ್ವಜನಿಕರಿಗೆ ಅನುಕೂಲ
ಮಾಡಿ ಕೊಡಬೇಕಿದೆ. ಲಕ್ಷಾಂತರ ರೂ. ವೆಚ್ಚ ಮಾಡಿ ನಿರ್ಮಿಸಿರುವ ಘಟಕದ ಯಂತ್ರೋಪಕರಣಗಳು ತುಕ್ಕು ಹಿಡಿಯುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ
ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳು ಗಮನ ಹರಿಸಬೇಕಾಗಿದೆ.