ಪಿವಿ ವಿಶೇಷ

ಅತ್ಯಂತ ವಿಜೃಂಭಣೆಯಿಂದ ಅದ್ದೂರಿಯಾಗಿ ಆರಂಭಗೊಂಡ ಭಟ್ಕಳ ಮಾರಿ ಜಾತ್ರೆ

ಭಟ್ಕಳ: ತಾಲೂಕಿನ ಅತಿ ಪ್ರಸಿದ್ದ ಜಾತ್ರೆಯಾದ ಶ್ರೀ ಮಾರಿ ಜಾತ್ರೆ ಬುಧವಾರದಂದು ಬೆಳಿಗ್ಗೆ 5.30ಕ್ಕೆ ಇಲ್ಲಿನ ಮಾರಿಕಾಂಬಾ ದೇವಸ್ಥಾನದಲ್ಲಿ ಮಾರಿಯಮ್ಮ ಗದ್ದುಗೆ ಏರುವುದರ ಮೂಲಕ ವಿದ್ಯುಕ್ತವಾಗಿ ಭಟ್ಕಳ ಮಾರಿಜಾತ್ರೆ ಆರಂಭಗೊಂಡಿತು.

ಬುಧವಾರದಂದು ಮುಂಜಾನೆ ಕರೆತರಲಾದ ಮಾರಿದೇವಿಯ ಮೂರ್ತಿಯನ್ನು ಮಾರಿಕಾಂಬಾ ದೇವಿಯ ಎದುರಿನ ಪ್ರಾಂಗಣದ ಗರ್ಭಗುಡಿಯ ಹೊರಗಡೆ ಪ್ರತಿಷ್ಠಾಪನೆ ಮಾಡಲಾಯಿತು.

ಎರಡು ದಿವಸ ನಡೆಯುವ ಈ ಜಾತ್ರೆಯಲ್ಲಿ ಮೊದಲನೇ ದಿನವಾದ ಬುಧವಾರ ದೂರದ ಊರಿನವರು ತಮ್ಮ ಮನೆಯಲ್ಲಿ ಹಬ್ಬ ಆಚರಿಸುತ್ತಾರೆ ಮತ್ತು ಎರಡನೇ ದಿನವಾದ ಗುರುವಾರದಂದು ಸ್ಥಳೀಯರು ಹಬ್ಬ ಆಚರಿಸುವ ಪದ್ದತಿ ರೂಢಿಯಲ್ಲಿದೆ.

ಸಂಭ್ರಮದಿಂದ ಜರುಗುವ ಈ ಜಾತ್ರೆಯಲ್ಲಿ ಅಕ್ಕಪಕ್ಕದ ತಾಲೂಕಿನಿಂದಲೂ ಭಕ್ತರು ಬಂದು ದೇವಿಯ ಆಶೀರ್ವಾದ ಪಡೆಯುತ್ತಿದ್ದು, ಉದ್ದದ ಸಾಲಿನಲ್ಲಿ ನಿಂತು ಸಾವಿರಾರು ಭಕ್ತರು ದರ್ಶನ ಪಡೆಯುತ್ತಿದ್ದಾರೆ. ಭಕ್ತರು ಹಣ್ಣು ಕಾಯಿ ನೀಡಿ ಪೂಜೆಯ ನ್ನು ಮಾಡಿಸುತ್ತಿದ್ದಾರೆ.

ದೇವಸ್ಥಾನದ ಆಡಳಿತ ಮಂಡಳಿಯಿಂದ ಭಕ್ತರ ದರ್ಶಕ್ಕೆ ಉತ್ತಮ ವ್ಯವಸ್ಥೆ ಮಾಡಿಕೊಟ್ಟಿರುವುದರಿಂದ ಮಾರಿ ದೇವಿ ದರ್ಶನಕ್ಕೆ ಯಾವುದೇ ತೊಂದರೆಯಾಗದಂತೆ ಭಕ್ತರಿಗೆ ಸರಾಗವಾಗಿ ದರ್ಶನ ಸಿಗುತ್ತಿದೆ. ಮಾರಿರೂಪದಲ್ಲಿ ಕುಳಿತಿರುವ ಈ ದೇವಿಗೆ ಭಕ್ತರು ಕಣ್ಣು ಬೇನೆ, ಸಿಡುಬು ಹಾಗು ಇನ್ನಿತರ ಸಾಂಕ್ರಾಮಿಕ ರೋಗಗಳು ಬಾರದೇ ತಡೆಗಟ್ಟುವಂತೆ ಭಕ್ತಿಯಿಂದ ಹೂವಿನ ಟೋಪಿ, ಎಲೆಯಿಂದ ಮಾಡಿದ ಹೂ ಕಟ್ಟು, ಬೆಳ್ಳಿಯ ಕಣ್ಣುಗಳನ್ನು ಅರ್ಪಿಸಿ ಕಾಪಾಡುವಂತೆ ಮೊರೆ ಇಡುವುದು ಈ ಜಾತ್ರೆಯ ವಿಶೇಷತೆಗಳಲ್ಲಿ ಒಂದಾಗಿದೆ.

ಈ ಬಾರಿಯೂ ಸಹ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಹರಕೆ ತೀರಿಸಿದ್ದಾರೆ. ತಮಗೆ ಬಂದ ಕಷ್ಟ ಕಾರ್ಪಣ್ಯಗಳು ದೂರಾಗಲಿ ಎಂದು ಹರಿಕೆ ಹೊತ್ತ ಭಕ್ತರು, ವಾರ್ಷಿಕ ಜಾತ್ರೆಯಲ್ಲಿ ಹರಕೆ ತೀರಿಸುತ್ತಿದ್ದಾರೆ.ಮಾರಿ ಜಾತ್ರೆ ಹಿನ್ನೆಲೆ ಭಟ್ಕಳದಲ್ಲಿ ಪೊಲೀಸ್‌ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ಜಿಲ್ಲೆಯಲ್ಲಿಯೇ ಅತ್ಯಂತ ವಿಜೃಂಭಣೆಯಿಂದ ಅದ್ದೂರಿಯಾಗಿ ನಡೆಯುವ ಮಾರಿ ಜಾತ್ರೆಗಳಲ್ಲಿ ಭಟ್ಕಳ ತಾಲೂಕಿನ ಮಾರಿ ಜಾತ್ರೆ ಸಹ ಒಂದು. ಭಕರು ಬೇರೆ ಬೇರೆ ಊರುಗಳಿಂದ ಬಂದು ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆಯುತ್ತಿದ್ದಾರೆ. ಸಾಮಾಜಿಕ ಹೋರಾಟಗಾರ ಈರಾ ನಾಯ್ಕ್ ಚೌತನಿ, ಆಡಳಿತ ಕಮಿಟಿ ಸದಸ್ಯರು, ಮುಂತಾದ ವರು ಭಕ್ತಾದಿಗಳಿಗೆ ಯಾವುದೇ ಸಂಸ್ಯೆಯಾಗದೆ ಸರಾಗವಾಗಿ ದರ್ಶನ ಕ್ಕೆ ಅನುಕೂಲವಾಗುವಂತೆ ಮಾಡಿಕೊಡುತ್ತಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button