ಪಿವಿ ವಿಶೇಷ

ಅಪರಾಧ ಪ್ರಕರಣಗಳಲ್ಲಿ ನೋಟಿಸ್ ನೀಡದೆ ವ್ಯಕ್ತಿಯನ್ನು ಠಾಣೆಗೆ ಕರೆಸುವಂತಿಲ್ಲ : ಹೈಕೋರ್ಟ್

ಬೆಂಗಳೂರು: ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಹತ್ವದ ತೀರ್ಮಾನವನ್ನು ಪ್ರಕಟಿಸಿರುವ ಕರ್ನಾಟಕ ಹೈಕೋರ್ಟ್ ಇನ್ನೂ ಮುಂದೆ ಪ್ರಕರಣಕ್ಕೆ ಸಂಬಂಧಿಸಿದಂತ ವ್ಯಕ್ತಿಯನ್ನು ನೋಟಿಸ್ ನೀಡದೆ ವಿನಾಕಾರಣ ಪೊಲೀಸ್ ಠಾಣೆಗೆ ಕರೆಸುವಂತಿಲ್ಲ ಎಂದು ರಾಜ್ಯ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಿದೆ.

ಒಂದು ವೇಳೆ ಅಪರಾಧ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಯನ್ನು ಠಾಣೆಗೆ ಕರೆಸುವುದಾದರೆ ಅಪರಾಧ ಕುರಿತು ಕ್ರೈಂ ಸಂಖ್ಯೆ, ಎಫ್ಐಆರ್ ಪ್ರತಿ, ಅಪರಾಧದ ಬಗ್ಗೆ ಮಾಹಿತಿ ಮತ್ತು ದೂರಿನ ಸಂಕ್ಷಿಪ್ತ ಮಾಹಿತಿ ಒಳಗೊಂಡ ನೋಟಿಸ್ ಅನ್ನು ಕಡ್ಡಾಯವಾಗಿ ನೀಡಬೇಕು ಎಂದು ನಿರ್ದೇಶನದಲ್ಲಿ ತಿಳಿಸಲಾಗಿದೆ.

ಅಲ್ಲದೆ ಈ ವಿಚಾರವನ್ನು ಸಾರ್ವಜನಿಕರ ಗಮನಕ್ಕೆ ತರುವಂತೆ ರಾಜ್ಯಗೃಹ ಕಾರ್ಯದರ್ಶಿ ಮತ್ತು ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಸೂಕ್ತ ಮಾರ್ಗ ಸೂಚಿಗಳನ್ನು ಹೂರಡಿಸುವಂತೆ ಸೂಚಿಸಲಾಗಿದೆ. ಬೆಂಗಳೂರಿನ ಅಮೃತಹಳ್ಳಿ ಠಾಣೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ವಾಟ್ಸಪ್ ಮೂಲಕ ನೀವು ಠಾಣೆಗೆ ಹಾಜರಾಗಬೇಕೆಂದು ಕಳುಹಿಸಿದ ಸಂದೇಶವನ್ನು ಪ್ರಶ್ನಿಸಿ ಪತ್ರಕರ್ತ ಟಿ.ಆರ್. ಶಿವಪ್ರಸಾದ್ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕ ಸದಸ್ಯಪೀಠ ಈ ಆದೇಶವನ್ನು ನೀಡಿದೆ.

ಭಾರತೀಯ ನ್ಯಾಯ ಸುರಕ್ಷಾ ಸಂಹಿತೆ 2023ರ ಕಲಂ 35ರ ಅನುಸಾರ ಆರೋಪಿಗೆ ಚೆಕ್ ಲಿಸ್ಟ್ ಒದಗಿಸದೆ ಹೋದಲ್ಲಿ ಅಂತಹ ಆರೋಪಿಯು ಠಾಣಾಧಿಕಾರಿ ಮುಂದೆ ಹಾಜರಾಗುವ ಅವಶ್ಯಕತೆ ಇಲ್ಲ ಅಂತೆಯೇ ಪೊಲೀಸರು ಇಂತಹ ಆರೋಪಿಯ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳುವಂತಿಲ್ಲ ಎಂದು ನ್ಯಾಯಪೀಠ ಆದೇಶದಲ್ಲಿ ತಿಳಿಸಿದೆ.

ಅರ್ಜಿದಾರರ ಪರ ಹಿರಿಯ ವಕೀಲ ಎಂ ಅರುಣ್ ಶ್ಯಾಮ್ ವಾದ ಮಂಡಿಸಿದರು. ಟಿವಿ ಚಾನೆಲ್ ನ ಸಿ ಈ ಓ ವಿಜಯ್ ಟಾಟಾ ನೀಡಿದ ದೂರಿನ ಅನುಸಾರ ಅಮೃತ ಹಳ್ಳಿ ಠಾಣೆಯ ಪೊಲೀಸರು ಟಿಆರ್ ಶಿವಪ್ರಸಾದ್ ಗೆ ವಾಟ್ಸಪ್ ಮೂಲಕ ಸಂದೇಶ ಕಳುಹಿಸಿ ಠಾಣೆಗೆ ಹಾಜರಾಗಬೇಕೆಂದು ಸೂಚಿಸಿದರು. ಅದನ್ನು ಪ್ರಶ್ನಿಸಿ ಅವರು ನ್ಯಾಯಾಲಯದ ಮೊರೆ ಹೋಗಿದ್ದರು.

Related Articles

Leave a Reply

Your email address will not be published. Required fields are marked *

Back to top button