ರಾಜ್ಯ
ಮಂಗಳೂರು: ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನ- ಇಬ್ಬರನ್ನು ಬಂಧಿಸಿದ ಸಿಸಿಬಿ
ಆಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕೋಟ್ಯಂತರ ರೂ. ಬೆಲೆಬಾಳುವ ಆಂಬರ್-ಗ್ರೀಸ್ (ತಿಮಿಂಗಿಲ ವಾಂತಿ) ಯನ್ನು ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಬಂಧಿಸಿರುವ ಮಂಗಳೂರು ಸಿಸಿಬಿ ಪೊಲೀಸರು ಕೋಟ್ಯಂತರ ಮೌಲ್ಯದ ಸೊತ್ತನ್ನು ವಶಪಡಿಸಿಕೊಂಡಿದ್ದಾರೆ.
ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಪಡ್ಯಾರು ಮನೆ ನಿವಾಸಿ ನಿಮಿತ್ (26) ಹಾಗೂ ಪುಂಜಾಲಕಟ್ಟೆ ಕುಕ್ಕಳ ಮನೆ ನಿವಾಸಿ ಯೋಗೀಶ್ ಪೂಜಾರಿ(41) ಬಂಧಿತ ಆರೋಪಿಗಳು. ಬಂಧಿತರಿಂದ 3.2 ಕೆಜಿ ತೂಕದ ಅಂಬರ್ ಗ್ರೀಸ್ ಹಾಗೂ 2 ಮೊಬೈಲ್ ಫೋನ್ ನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಇದಕ್ಕೆ ಆಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸುಮಾರು 3.2 ಕೋಟಿ ರೂ. ಮೌಲ್ಯ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.