ಮಹದೇಶ್ವರ ಬೆಟ್ಟದಿಂದ ಚಾಲನೆಗೊಳ್ಳಲಿರುವ ಭಾರತೀಯ ಜನತಾ ಪಾರ್ಟಿಯ ವಿಜಯ ಸಂಕಲ್ಪ ಯಾತ್ರೆ.
ಹನೂರು : ಭಾರತೀಯ ಜನತಾ ಪಾರ್ಟಿಯ ವಿಜಯ ಸಂಕಲ್ಪ ಯಾತ್ರೆಗೆ ಮಾರ್ಚ್ ೧ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಚಾಲನೆ ದೊರೆಯಲಿದೆ ಎಂದು ಬಿಜೆಪಿ ಚಾಮರಾಜನಗರ ಜಿಲ್ಲಾ ಉಪಾಧ್ಯಕ್ಷ ಡಾ. ದತ್ತೇಶ್ ಕುಮಾರ್ ತಿಳಿಸಿದರು. ಹನೂರು ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಹನೂರು ತಾಲೂಕಿನ ಮಹದೇಶ್ವರಬೆಟ್ಟದಲ್ಲಿ ಪ್ರಥಮವಾಗಿ ಮಾರ್ಚ್ ೧ರಂದು ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ಆಗಲಿದೆ. ಹನೂರು ತಾಲೂಕಿನ ಶ್ರೀ ಮಲೆ ಮಾದೇಶ್ವರ ಬೆಟ್ಟದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೇರಿದಂತೆ ಬಿಜೆಪಿ ಪಕ್ಷದ ರಾಷ್ಟ್ರೀಯ ನಾಯಕರು ಇದಕ್ಕೂ ಮುನ್ನ ಮಹದೇಶ್ವರಬೆಟ್ಟೆದಲ್ಲಿ ಮಹದೇಶ್ವರಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಲಿದ್ದು, ನಂತರ ರಂಗಮAದಿರ ಉದ್ಘಾಟನೆ ಮಾಡಲಿದ್ದಾರೆ. ಅಲ್ಲದೆ ಶ್ರೀ ಸಾಲೂರು ಬೃಹನ್ಮಠದ ಶ್ರೀಗಳ ಆಶೀರ್ವಾದ ಪಡೆಯಲಿದ್ದಾರೆ. ಬಳಿಕ ಆರ್.ಎಸ್.ದೊಡ್ಡಿ ಸಮೀಪ ಬೃಹತ್ ಸಾರ್ವಜನಿಕ ಸಭೆಯನ್ನು ಏರ್ಪಡಿಸಲಾಗಿದೆ. ಈ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಸಚಿವ ವಿ.ಸೋಮಣ್ಣ, ಕೆ.ಎಸ್.ಈಶ್ವರಪ್ಪ, ನಾರಾಯಣಗೌಡ, ಸುನಿಲ್ಕುಮಾರ್, ಅರಗ ಜ್ಞಾನೇಂದ್ರ, ಸಂಸದ ಶ್ರೀನಿವಾಸ್ಪ್ರಸಾದ್ ಸೇರಿದಂತೆ ಇನ್ನಿತರ ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಸಾರ್ವಜನಿಕ ಸಭೆಗೆ ವಿವಿಧ ಯೋಜನೆಯಡಿಯ ಫಲಾನುಭವಿಗಳು ಒಳಗೊಂಡು ಸುಮಾರು ೨೦ಕ್ಕೂ ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಬಿಜೆಪಿ ಪ್ರಪಂಚದಲ್ಲೇ ದೊಡ್ಡ ಪಕ್ಷವಾಗಿದೆ. ಪ್ರಧಾನಮಂತ್ರಿ ನರೇಂದ್ರಮೋದಿಯವರ ನಾಯಕತ್ವವನ್ನು ಎಲ್ಲರೂ ಮೆಚ್ಚುವಂತಾಗಿದೆ. ಅವರು ನೀಡಿರುವ ಯೋಜನೆಗಳಿಂದ ಎಲ್ಲ ವರ್ಗದವರಿಗೆ ಅನುಕೂಲವಾಗಿದೆ ಎಂದರು.
ಈ ಸಂದರ್ಭದಲ್ಲಿ ಜಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆರೆಹಳ್ಳಿ ಮಹಾದೇವಸ್ವಾಮಿ, ಜಿಲ್ಲಾ ಉಪಾಧ್ಯಕ್ಷ ವೆಂಕಟಸ್ವಾಮಿ, ಒಬಿಸಿ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಬಿ.ವೆಂಕಟೇಶ್, ಮುಖಂಡರಾದ ಡಾ.ಪ್ರೀತನ್ ನಾಗಪ್ಪ, ನಿಶಾಂತ್, ಜಿಲ್ಲಾ ಮಾಧ್ಯಮ ವಕ್ತಾರರಾದ ಬಸವರಾಜಪ್ಪ, ಕಾಮಗೆರೆ ಮಧು, ಜಿಲ್ಲಾ ರೈತ ಮೋರ್ಚಾದ ಉಪಾಧ್ಯಕ್ಷ ವೆಂಕಟೇಗೌಡ, ಹನೂರು ಮಂಡಲ ಅಧ್ಯಕ್ಷ ಸಿದ್ದಪ್ಪ, ಕಾರ್ಯದರ್ಶಿ ಶ್ರೀನಿವಾಸ್ ಮತ್ತಿತರರು ಇದ್ದರು.