ಪಿವಿ ವಿಶೇಷ

ಹನೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಆರ್ ನರೇಂದ್ರ ರವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡಿ ಸಚಿವ ಸ್ಥಾನ ನೀಡುವಂತೆ ಉಪ್ಪಾರ ಸಮುದಾಯದ ಮುಖಂಡ ರಾಚಪ್ಪಾಜಿ ಒತ್ತಾಯ.

ಶಾರುಕ್ ಖಾನ್ ಹನೂರು

ಹನೂರು : ವಿಧಾನಸಭಾ ಕ್ಷೇತ್ರದ ಧೀಮಂತ ನಾಯಕ ದಿ. ಮಾಜಿ ಸಚಿವ ರಾಜುಗೌಡ ರವರು ಇಂದಿರಾ ಕಾಂಗ್ರೆಸ್, ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್, ಪಕ್ಷೇತರ ರಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿ ಎಸ್ ಎಮ್ ಕೃಷ್ಣ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೃಷಿ ಮತ್ತು ಸಂಸ್ಕರಣ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿ ತಮ್ಮದೇ ಆದ ಸೇವೆ ಸಲ್ಲಿಸಿದ್ದಾರೆ. ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಹಗಲಿರುಳು ಶ್ರಮಿಸಿದ್ದಾರೆ. ಅದೇ ನಿಟ್ಟಿನಲ್ಲಿ 30 ವರ್ಷಗಳಿಂದ ಪಕ್ಷದಲ್ಲಿ ಗುರುತಿಸಿಕೊಂಡಿರುವ ಆರ್ ನರೇಂದ್ರ ಅವರು ಸಹ ನಾಲ್ಕು ಚುನಾವಣೆಗಳಲ್ಲಿ ಸ್ಪರ್ಧಿಸಿ ಮೊದಲ ಚುನಾವಣೆಯಲ್ಲಿ ಪರಾಭವಗೊಂಡು ನಂತರ ಸತತ ಮೂರು ಚುನಾವಣೆಗಳಲ್ಲಿ ಜಯಗಳಿಸಿ ಹ್ಯಾಟ್ರಿಕ್ ಶಾಸಕ ಎನಿಸಿಕೊಂಡಿದ್ದರು. ಈ ಬಾರಿಯ ವಿಧಾನಸಭಾ ಕ್ಷೇತ್ರ ಚುನಾವಣೆಯಲ್ಲಿ ಐದನೇ ಬಾರಿಗೆ ಸ್ಪರ್ಧಿಸಿ ವಿರೋಧ ಪಕ್ಷಗಳ ಕುತಂತ್ರ ಹಾಗೂ ಅಪಪ್ರಚಾರದಿಂದ ಸೋಲನ್ನುಭವಿಸ ಬೇಕಾಯಿತು. ಕಳೆದ 20 ವರ್ಷಗಳಲ್ಲಿ ಪಕ್ಷಕ್ಕಾಗಿ ತಮ್ಮ ಜೀವನವನ್ನೇ ಮೀಸಲಿಟ್ಟಿದ್ದಾರೆ. ಕಳೆದ ಮೂರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಆ ಧ್ರುವನಾರಾಯಣ್ ರವರಿಗೆ ಹನೂರು ಕ್ಷೇತ್ರದಿಂದ ಸುಮಾರು 20 ಸಾವಿರಗಳ ಮುನ್ನಡೆ ಕೊಟ್ಟು ಪಕ್ಷದ ಅಭ್ಯರ್ಥಿಯ ಗೆಲುವಿಗೆ ಕಾರಣಿ ಭೂತರಾಗಿದ್ದಾರೆ. ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರವಿರುವುದರಿಂದ ಇವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡಿ ಸಚಿವರನ್ನಾಗಿ ಮಾಡಿ ಹನೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಹಾಗೂ ರಾಜ್ಯದ ಅಭಿವೃದ್ಧಿಗೆ ಒಂದು ಅವಕಾಶ ಮಾಡಿಕೊಡುವಂತೆ ಒತ್ತಾಯಿಸಿದ್ದಾರೆ. ಕಳೆದ 30 ವರ್ಷಗಳಿಂದ ಹನೂರು ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಅಧಿಕಾರ ಹಿಡಿಯುವಲ್ಲಿ ಮಾಜಿ ಶಾಸಕ ಆರ್ ನರೇಂದ್ರ ರವರು ಹಗಲಿರುಳು ಸಮವಹಿಸಿ ಪಕ್ಷಕ್ಕಾಗಿ ದುಡಿದ ಪರಿಣಾಮ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಅದರಂತೆ ಮುಂದಿನ ತಾಲೂಕು ಪಂಚಾಯಿತಿ ಜಿಲ್ಲಾ ಪಂಚಾಯಿತಿ ಹಾಗೂ ಲೋಕಸಭಾ ಚುನಾವಣೆಗಳಲ್ಲಿ ಹನೂರು ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮಾಡಬೇಕಾದರೆ ಮಾಜಿ ಶಾಸಕ ಆರ್ ನರೇಂದ್ರ ಅವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡಲೇಬೇಕು, ನಮ್ಮದೇ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವುದರಿಂದ ಹನೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಈಗಾಗಲೇ ಹಲವು ರೂಪುರೇಷೆಗಳನ್ನು ಸಿದ್ಧಪಡಿಸಿದ್ದಾರೆ ಅದರಂತೆ ಅಭಿವೃದ್ಧಿಪಡಿಸಲು ಸರ್ಕಾರವು ಸಹ ಅನುದಾನ ನೀಡಬೇಕು ಎಂದು ಮನವಿ ಮಾಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button