ಭಟ್ಕಳದ ತಾಲೂಕ ಮೈದಾನದಲ್ಲಿ ವಿಜೃಂಭಣೆಯಿಂದ ನಡೆದ 67 ನೆ ಕನ್ನಡ ರಾಜ್ಯೋತ್ಸವ
ಭಟ್ಕಳದ ತಾಲೂಕ ಮೈದಾನದಲ್ಲಿ ವಿಜೃಂಭಣೆಯಿಂದ ನಡೆದ 67 ನೆ ಕನ್ನಡ ರಾಜ್ಯೋತ್ಸವ
ಭಟ್ಕಳ – ನವಂಬರ್ 1 ಮಂಗಳವಾರ 67 ನೇಯ ಕನ್ನಡ
ರಾಜ್ಯೋತ್ಸವವನ್ನು ಭಟ್ಕಳ ತಾಲೂಕ ಕ್ರೀಡಾಂಗಣದಲ್ಲಿ ತಾಲೂಕ ಆಡಳಿತ ನೇತೃತ್ವದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಗೌರವ ವಂದನೆ ಸ್ವೀಕರಿಸಿ ದ್ವಜಾರೋಹಣವನ್ನು ಸಹಾಯಕ ಆಯುಕ್ತೆ ಮಮತಾದೇವಿ ನೆರವೇರಿಸಿದರು. ಭಟ್ಕಳ ತಾಲೂಕ ಅಡಳಿತ ಸೌದ ಕಚೇರಿಯ ಮುಂಭಾಗದಲ್ಲಿ ಕನ್ನಡಾಂಬೆ ತಾಯಿ ಭುವನೇಶ್ವರಿಯ ಪೂಜೆಯೊಂದಿಗೆ ಆರಂಭಗೊಂಡ ಆಕರ್ಷಕ ಮೆರವಣಿಗೆಯಲ್ಲಿ ಪೊಲೀಸ್, ಅರಣ್ಯ ಇಲಾಖೆ, ವಿಧದ ಸರಕಾರಿ ಇಲಾಖೆ ತಂಡಗಳು, ವಿವಿಧ ಶಾಲಾ ಮಕ್ಕಳ ತಂಡಗಳು ಭಾಗವಹಿಸಿದ್ದವು. ವಿವಿಧ ಇಲಾಖೆಗಳಿಂದ ತಯಾರಿಸಿದ ಸ್ತಬ್ದ ಚಿತ್ರಗಳು ಭಾಗಿಯಾಗಿದ್ದವು. ಕಾರ್ಯಕ್ರಮದಲ್ಲಿ ವಿಶೇಷ ಸಾಧನೆ ಮಾಡಿದ ತಾಲೂಕಿನ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.ಭಟ್ಕಳ ತಾಲೂಕ ಕನ್ನಡ ಸಾಹಿತ್ಯ ಪರೀಷತ್ತು ಅಧ್ಯಕ್ಷ ಗಂಗಾಧರ ನಾಯ್ಕ ಕನ್ನಡ ನಾಡು,ನುಡಿ.ನೆಲ .ಜಲ ದ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು. ಶಾಸಕ ಸುನೀಲ್ ನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಪಶ್ಚಿಮ ಘಟ್ಟ ಕಾರ್ಯಪಡೆ ಅಧ್ಯಕ್ಷ ಗೋವಿಂದ ಮುಖ್ಯ , ಪುರಸಭಾ ಅಧ್ಯಕ್ಷ ಪರ್ವೇಜ್ ಕಾಶಿಮ್, ತಹಸೀಲ್ದಾರ್ ಸುಮಂತ್, ಡಿ.ಎಸ್.ಪಿ ಕೆ ಯು ಬಿಳಿಯಪ್ಪ, ತಾಲೂಕ ಸರಕಾರಿ ನೌಕರರ ಸಂಘದ ಅಧ್ಯಕ್ಷ ಮೋಹನ್ ನಾಯ್ಕ ಮುಂತಾದವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಜ ಸ್ಥಳೀಯ ಜನಪ್ರತಿನಿಧಿಗಳು, ತಾಲೂಕಿನ ವಿವಿಧ ಅಧಿಕಾರಿಗಳು, ಶಾಲಾ ಮಕ್ಕಳು, ಪೊಲೀಸ್ ಅಧಿಕಾರಿ/ ಸಿಬ್ಬಂದಿಗಳು, ಕನ್ನಡಾಭಿಮಾನಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
ಕೊನೆಯಲ್ಲಿ ಶಾಲಾ ಮಕ್ಕಳಿಂದ ಕನ್ನಡ ಮನರಂಜನಾ ಕಾರ್ಯಕ್ರಮ ನಡೆಯಿತು.