ಪಿವಿ ವಿಶೇಷ
ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ : ಒಬ್ಬ ಸ್ಥಳದಲ್ಲೇ ಸಾವು ಮತ್ತೊಬ್ಬನ ಸ್ಥಿತಿ ಗಂಭೀರ…!
ಹನೂರು :- ತಾಲೂಕಿನ ವಡಕೆಹಳ್ಳ ಗ್ರಾಮ ಸಮೀಪ ಇಂದು ಮಧ್ಯಾಹ್ನ 1 ಗಂಟೆ ಸಮಯದಲ್ಲಿ ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ತುಮಕೂರು ಮೂಲದ ಭಕ್ತಾದಿಗಳು ಮಹದೇಶ್ವರ ಬೆಟ್ಟಕ್ಕೆ ಹೋಗಿ ಪೂಜೆ ಮುಗಿಸಿಕೊಂಡು ತಮ್ಮ ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ಮತ್ತೊಂದು ಬೈಕ್ ಮಲೆ ಮಾದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದ್ದು ಘಟನೆಯಲ್ಲಿ ಬೈಕ್ ಸವಾರ ಒಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಅಲ್ಲಿದ್ದಂತಹ ಸ್ಥಳೀಯರು ಗಂಭೀರ ಗಾಯಗೊಂಡ ವ್ಯಕ್ತಿಗೆ 108 ಆಂಬುಲೆನ್ಸ್ ಮುಖಾಂತರ ಸಮೀಪದ ಆಸ್ಪತ್ರೆಗೆ ರವಾನಿಸಿದ್ದಾರೆ ಬೈಕ್ ಸವಾರರು ಎಲ್ಲಿಯವರೆಂದು ಇನ್ನು ತಿಳಿದು ಬಂದಿಲ್ಲ ಸುದ್ದಿ ತಿಳಿದ ಮಲೆ ಮಹದೇಶ್ವರ ಬೆಟ್ಟದ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.