ಪಟ್ಟಣದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಪ್ರತಿಮೆ ಸ್ಥಳಾಂತರ..!
ಹನೂರು: ಪಟ್ಟಣದ ಮುಖ್ಯ ರಸ್ತೆ ಕಾಮಗಾರಿ ಸರ್ಕಲ್ ನಿರ್ಮಾಣ ಕಾಮಗಾರಿ ಹಿನ್ನೆಲೆಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಸರ್ಕಲ್ ನಲ್ಲಿ ಸ್ಥಾಪಿಸಲಾಗಿದ್ದ ಅಂಬೇಡ್ಕರ್ ಅವರ ಪ್ರತಿಮೆಯನ್ನು ಸುರಕ್ಷತಾ ದೃಷ್ಟಿಯಿಂದ ಸ್ಥಳಾಂತರ ಮಾಡಲಾಯಿತು.ತಾಲೂಕು ಉಪ ವಿಭಾಗಾಧಿಕಾರಿ ಮಹೇಶ್, ತಹಶೀಲ್ದಾರ್ ಗುರುಪ್ರಸಾದ್, ಸರ್ಕಲ್ ಇನ್ಸ್ಪೆಕ್ಟರ್ ಶಶಿಕುಮಾರ್, ಪಟ್ಟಣದ ಯಜಮಾನರು ಅಂಬೇಡ್ಕರ್ ಸಂಘದ ಯುವಕರು ಮುಖಂಡರ ಸಮ್ಮುಖದಲ್ಲಿ ಪೋಲಿಸ್ ಭದ್ರತೆಯೊಂದಿಗೆ ಡಾಕ್ಟರ್ ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ಸ್ಥಳಾಂತರ ಮಾಡಲಾಯಿತು.ಹನೂರು ಪಟ್ಟಣದ ಮುಖ್ಯರಸ್ತೆ ಸರ್ಕಲ್ ನಲ್ಲಿ ನಡೆಯುತ್ತಿರುವ ಕೇಶೀಫ್ ರಸ್ತೆ ಅಭಿವೃದ್ಧಿ ಕಾಮಗಾರಿ ಹಿನ್ನೆಲೆ ಪೊಲೀಸ್ ಠಾಣೆ ಮುಂಭಾಗ ಸರ್ಕಲ್ ನಲ್ಲಿ ಡಾಕ್ಟರ್ ಬಿ.ಆರ್ ಅಂಬೇಡ್ಕರ್ ಪ್ರತಿಮೆ ಇದ್ದು ಸರ್ಕಲ್ ಮಧ್ಯದಲ್ಲಿ ಅಂಬೇಡ್ಕರ್ ಅವರ ಪ್ರತಿಮೆಯನ್ನು ಸ್ಥಾಪಿಸಿ ಹೆಚ್ಚಿನ ಅಭಿವೃದ್ಧಿಪಡಿಸುವ ಹಿನ್ನೆಲೆ ಸ್ಥಳಾಂತರ ಮಾಡಿ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಇರಿಸಲಾಗಿದೆ.
ಈ ಬಗ್ಗೆ ತಾಲೂಕು ಉಪ ವಿಭಾಗಾಧಿಕಾರಿ ಮಹೇಶ್ ಅವರು ಮಾತನಾಡಿ ಪಟ್ಟಣದ ಸರ್ಕಲ್ ನಲ್ಲಿ ಈಗಾಗಲೇ ಇದ್ದಂತಹ ಡಾಕ್ಟರ್ ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ರಸ್ತೆಯ ಮಧ್ಯದಲ್ಲಿ ಪ್ರತಿಷ್ಠಾಪಿಸಿ ಹೆಚ್ಚಿನ ಅಭಿವೃದ್ಧಿಪಡಿಸುವ ಹಿನ್ನೆಲೆ ಪ್ರತಿಮೆಯನ್ನು ಸ್ಥಳಾಂತರಿಸಲಾಗಿದೆ. ಕೆಶೀಫ್ ರಸ್ತೆ ಅಭಿವೃದ್ಧಿ ಕಾಮಗಾರಿ ಮುಗಿದ ನಂತರ ಮತ್ತೆ ಅಂಬೇಡ್ಕರ್ ಅವರ ಮತ್ತೆ ಅಂಬೇಡ್ಕರ್ ಅವರ ಪ್ರತಿಮೆಯನ್ನು ಸ್ಥಾಪಿಸಿ ಸರ್ಕಲ್ ನಿರ್ಮಾಣ ಮಾಡಲಾಗುವುದು. ಪ್ರತಿಮೆ ಸುರಕ್ಷತಾ ದೃಷ್ಟಿಯಿಂದ ಅಲ್ಲಿಯತನಕ ಪ್ರತಿಮೆಯನ್ನು ಅಂಬೇಡ್ಕರ್ ಭವನದಲ್ಲಿ ಇರಿಸಲಾಗಿದ್ದು ಪೊಲೀಸ್ ಭದ್ರತೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಅವರ ಆದೇಶದಂತೆ ಡಾ.ಬಿಆರ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ಸ್ಥಳಾಂತರಿಸಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಪಟ್ಟಣ ಪಂಚಾಯಿತಿ ಹಾಗೂ ಡಾ. ಬಿಆರ್ ಅಂಬೇಡ್ಕರ್ ಸಂಘದವರಿಗೆ ಜವಾಬ್ದಾರಿಯನ್ನು ಹಸ್ತಾಂತರ ಮಾಡಲಾಗಿದೆ. ಅಂಬೇಡ್ಕರ್ ಭವನದಲ್ಲಿ ಸುರಕ್ಷಿತವಾಗಿ ಇರಿಸಲಾಗಿದೆ ರಾತ್ರಿ ಬೆಳಿಗ್ಗೆ ಪೊಲೀಸ್ ಇಲಾಖೆಯಿಂದ ಬಿಟ್ ಗುರುತು ಮಾಡಿಕೊಂಡು ಸೂಕ್ತ ಬಂದೋಬಸ್ ಮಾಡುವಂತೆ ತಿಳಿಸಲಾಗಿದೆ ಎಂದರು.ಪಟ್ಟಣದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ರಸ್ತೆಯ ಮಧ್ಯಭಾಗದಲ್ಲಿ ಬರುವಂತೆ ವೃತ್ತ ಮಾಡಿಕೊಡುವಂತೆ ಹನೂರು ಪಟ್ಟಣದ ಆಡಳಿತ ಸಮುದಾಯದ ಮುಖಂಡರು ಶಾಸಕ ಎಂ.ಆರ್ ಮಂಜುನಾಥ್, ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್ ಜಿಲ್ಲಾಧಿಕಾರಿ ಶಿಲ್ಪನಾಗ್ ಹಾಗೂ ಕೊಳ್ಳೇಗಾಲ ಉಪ ವಿಭಾಗಾಧಿಕಾರಿ ಮಹೇಶ್ ಅವರಲ್ಲಿ ಹಿಂದೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಪ್ರತಿಮೆ ಅಭಿವೃದ್ದಿ ಕಾಮಗಾರಿ ದೃಷ್ಟಿಯಿಂದ ಸ್ಥಳಾಂತರ ಮಾಡಲಾಗಿದೆ.
ಕೆಫೀಫ್ ಕಾಮಗಾರಿ ವೇಳೆ ಪಾರ್ಕಿಂಗ್ ವ್ಯವಸ್ಥೆ ಮಾಡಿಕೊಂಡು ಉಳಿದ ಕಾಮಗಾರಿಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು. ಅಂಬೇಡ್ಕರ್ ಅವರ ಪ್ರತಿಮೆಗೆ ಸಂಬಂಧಪಟ್ಟ ಮೇಲಾಧಿಕಾರಿಗಳ ಅನುಮೋದನೆಗೆ ಕಳಿಸಲಾಗಿದೆ ಅನುಮೋದನೆಯ ಆದೇಶ ಬಂದ ಕೂಡಲೇ ಇಂಜಿನಿಯರ್ ಅವರ ಪ್ಲಾನ್ ಪ್ರಕಾರ ಸರ್ಕಲ್ ಕಾಮಗಾರಿ ನಿರ್ಮಾಣ ಮುಗಿಯಲಿದೆ ಎಂದರು.ಹನೂರು ಪಟ್ಟಣ ಸೇರಿದಂತೆ ಮಂಗಲ ಹಾಗೂ ಕಾಮಗೆರೆಯಲ್ಲಿ ಕೆಶೀಫ್ ವತಿಯಿಂದ ರಸ್ತೆ ನಡೆಯುತ್ತಿರುವ ಹಿನ್ನೆಲೆ ಆದಷ್ಟು ಬೇಗ ರಸ್ತೆಯ ಮುಗಿಯಬೇಕು. ಕೆಲವು ಮಾಲೀಕರಿಗೆ ಪರಿಹಾರ ಹಣ ನೀಡಲಾಗಿದೆ. ಇನ್ನು ತೆರವು ಮಾಡದಿರುವ ಅಂಗಡಿ ಕಟ್ಟಡ ಮಳಿಗೆಗಳನ್ನು ತೆರವು ಮಾಡಿ ರಸ್ತೆ ಕಾಮಗಾರಿ ಮುಗಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಇದೆ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಅಶೋಕ್, ಪ್ರಭಾರ ರಾಜಸ್ವ ನಿರೀಕ್ಷಕ ಶೇಷಣ್ಣ, ಪಟ್ಟಣ ಪಂಚಾಯಿತಿ ಸದಸ್ಯ ಸಂಪತ್ ಕುಮಾರ್, ಕಿರಣ್ ಕುಮಾರ್, ಸೇರಿದಂತೆ ಸಮುದಾಯದ ಯಜಮಾನರುಗಳು ಮುಖಂಡರುಗಳು ಯುವಕರು ಇದ್ದರು.