ಮಣಿಪಾಲ : ವೈಶ್ಯವಾಟಿಕೆ ದಂಧೆ ನಡೆಸುತ್ತಿದ್ದ ಲಾಡ್ಜ್ ಮೇಲೆ ಪೊಲೀಸರ ದಾಳಿ ಆರೋಪಿಗಳು ಪರಾರಿ
ಮಣಿಪಾಲ್: 80 ಬಡಗಬೆಟ್ಟು ಗ್ರಾಮದ ಶಾಂತಿನಗರ ದಲ್ಲಿರುವ ಸಮೃದ್ಧಿ ಬೋರ್ಡಿಂಗ್ ಅಂಡ್ ಲಾಡ್ಜಿಂಗ್ ನಲ್ಲಿ ವೈಶ್ಯವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಮಣಿಪಾಲ್ ಠಾಣೆಯ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಲಾಡ್ಜ್ ನಲ್ಲಿ ಮಹಿಳೆಯರನ್ನು ಬಲವಂತವಾಗಿ ಇರಿಸಿಕೊಂಡು ಅವರಿಂದ ವೈಶ್ಯವಾಟಿಕೆ ದಂಧೆ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ. ದಾಳಿ ನಡೆಸಿದ ಸಂದರ್ಭದಲ್ಲಿ ಕೊಠಡಿಯಲ್ಲಿದ್ದ ಪಶ್ಚಿಮ ಬಂಗಾಳ ಮೂಲದ ಯುವತಿಯನ್ನು ರಕ್ಷಿಸಲಾಗಿದ್ದು,ಆಕೆಯಿಂದ ಮಾಹಿತಿಯನ್ನು ಪಡೆದಿರುವ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಕೃತ್ಯದಲ್ಲಿ ಭಾಗಿಯಾಗಿದ್ದ ಆರೋಪಿಗಳು ಪರಾರಿಯಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಅಕ್ರಮವಾಗಿ ತಮ್ಮ ಲಾಭಕ್ಕಾಗಿ ಬಲವಂತವಾಗಿ ವೇಶ್ಯಾವಾಟಿಕೆಗೆ ತಳ್ಳುತ್ತಿರುವ ಕಾಣದ ಕೈಗಳನ್ನು ಬಂಧಿಸಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಇನ್ನು ಈ ಬಗ್ಗೆ ಮಣಿಪಾಲ್ ಠಾಣಾ ಪೊಲೀಸರು ಅಪರಾಧ ಕ್ರಮಾಂಕ 186/ 2024 ಕಲಂ 3,4,5,6 ಐಟಿಪಿ ಆಕ್ಟ್ ಮತ್ತು 143 ಬಿಎನ್ಎಸ್ ರಂತೆ ಪ್ರಕರಣ ದಾಖಲಿಸಿಕೊಂಡಿರುತ್ತಾರೆ.