ಹಿಂಬಡ್ತಿ ಹೊಂದಿದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ನ್ಯಾಯ ಒದಗಿಸಿ: ಶಿಕ್ಷಕರ ಮನವಿ…!
ಹನೂರು :- 1ರಿಂದ 7ನೇ ತರಗತಿಗೆ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ನೇಮಕಗೊಂಡು ಇದೀಗ 2017ರಿಂದ ನೂತನವಾಗಿ ಪದವೀಧರ ಶಿಕ್ಷಕರ ನೇಮಕಾತಿಯ ನಂತರದಲ್ಲಿ ನೂತನ ವೃಂದ ನೇಮಕಾತಿ ನಿಯಮಗಳಂತೆ 1 ರಿಂದ 5 ರ ಬೋಧನೆಗೆ ಹಿಂಬಡ್ತಿ ಹೊಂದಿದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ನ್ಯಾಯ ಒದಗಿಸಿಕೊಡುವಂತೆ ಶಿಕ್ಷಕರು ಮನವಿ ಸಲ್ಲಿಸಿದರು.ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಗುರುಲಿಂಗಯ್ಯ ಹಾಗೂ ತಹಸಿಲ್ದಾರ್ ಗುರುಪ್ರಸಾದ್ ರವರಿಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಮನವಿ ಸಲ್ಲಿಸಿ ಹಕ್ಕೊತ್ತಾಯಗಳನ್ನು ಮಂಡಿಸಲಾಯಿತು.ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಗುರುಸ್ವಾಮಿ ರವರು ಮಾತನಾಡಿ ಸರ್ಕಾರಿ ನೌಕರರ ವೃತ್ತಿ ಜೀವನದಲ್ಲಿ ಮುಂಬಡ್ತಿಗಳಾಗುವುದು ಸಹಜ ಪ್ರಕ್ರಿಯೆ ಆದರೆ ಪ್ರಾಥಮಿಕ ಶಾಲಾ ಶಿಕ್ಷಕರು ಹಿಂಬಡ್ತಿಯನ್ನ ಅನುಭವಿಸಿ ಅವಮಾನದಲ್ಲಿ ಕೆಲಸ ನಿರ್ವಹಿಸುತ್ತಿರುವುದು ಶೋಚನೀಯ. ಸರಕಾರ ಈಗಲಾದರೂ ಎಚ್ಚೆತ್ತುಕೊಂಡು ವಿದ್ಯೆ ಕಲಿಸುವ ಗುರುಗಳಿಗೆ ನ್ಯಾಯ ನೀಡ ಬೇಕು ಎಂದು ಮನವಿ ಮಾಡಿದರು .ನಂತರ ಮಾತನಾಡಿದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೃಷ್ಣೇಗೌಡರವರು ನೌಕರರ ಬೇಡಿಕೆಗಳು ಈಡೇರುವವರೆಗೆ ಎಲ್ಲಾ ಸಂಘಗಳು ಒಗ್ಗಟ್ಟಿನಿಂದ ಹೋರಾಟ ಮಾಡಬೇಕಾಗುತ್ತದೆ ಶಿಕ್ಷಕರಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಿ ಕೊಡಬೇಕೆಂದು ಸರ್ಕಾರವನ್ನು ಇಲಾಖೆಯನ್ನು ಆಗ್ರಹಿಸಿದರು.ಈ ಸಂದರ್ಭದಲ್ಲಿ ಪದವಿಧರ ಶಿಕ್ಷಕರ ಸಂಘದ ಅಧ್ಯಕ್ಷ ಮಾದೇಶ್, ಬಡ್ತಿ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಶಿವಮಲ್ಲು ಗ್ರಾಮೀಣ ಶಿಕ್ಷಕರ ಸಂಘದ ಅಧ್ಯಕ್ಷ ಮಾದೇಶ್, ಶಿಕ್ಷಕರಾದ ವೀರಪ್ಪ, ದೇವರಾಜು, ಗಿರೀಶ್ ಸೇರಿದಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಎಲ್ಲಾ ಪದಾಧಿಕಾರಿಗಳು ನೂರಾರು ಶಿಕ್ಷಕರು ಭಾಗವಹಿಸಿದ್ದರು.