ಶಿಕ್ಷಣ ಕ್ಷೇತ್ರಕ್ಕೆ ಕ್ರೈಸ್ತ ವಿದ್ಯಾ ಸಂಸ್ಥೆಗಳ ಕೊಡುಗೆ ಹೆಚ್ಚು. ಶಾಲಾ ವಾರ್ಷಕೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಆರ್ . ನರೇಂದ್ರ ಅಭಿಪ್ರಾಯ.
ಹನೂರು : ಚಾಮರಾಜನಗರ ಜಿಲ್ಲೆ ಶೈಕ್ಷಣಿಕವಾಗಿ ಉತ್ತಮ ಸಾಧನೆಗೈಯುತ್ತಿದ್ದು ಈ ಸಾಧನೆಯಲ್ಲಿ ಕ್ರೈಸ್ತ ವಿದ್ಯಾ ಸಂಸ್ಥೆಗಳ ಬಹಳ ಮಹತ್ವವಾದದ್ದು ಎಂದು ಶಾಸಕ ಆರ್ ನರೇಂದ್ರ ಅಭಿಪ್ರಾಯಪಟ್ಟರು.ಪಟ್ಟಣದ ಕ್ರಿಸ್ತ ರಾಜ ವಿದ್ಯಾ ಸಂಸ್ಥೆ ಆವರಣದಲ್ಲಿ ಏರ್ಪಡಿಸಲಾದ್ದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ಚಾಮರಾಜನಗರ ಹಿಂದುಳಿದ ಜಿಲ್ಲೆ ಎಂಬ ಹೆಸರಿತ್ತು, ಆದರೆ ಇತ್ತೀಚಿನ ದಿನಗಳಲ್ಲಿ ಜಿಲ್ಲೆಯು ಸಾಮಾಜಿಕ ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಪ್ರಗತಿಯ ಪಥದಲ್ಲಿದೆ ಎಂದರು. ಈ ಭಾಗದ ವಿದ್ಯಾರ್ಥಿಗಳು ಶೈಕ್ಷಣಿಕ ರಂಗದಲ್ಲಿ ಉತ್ತಮ ಸಾಧನೆಗೈಯುತಿದ್ದು ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹನೂರು ತಾಲೂಕಿನ ಇಡೀ ರಾಜ್ಯವೇ ತಿರುಗು ನೋಡುವಂತಹ ಸಾಧನೆಗೈದಿದ್ದಾರೆ. ಈ ಮಹಾನ್ ಸಾಧನೆಯಲ್ಲಿ ಕ್ರಿಸ್ತ ವಿದ್ಯಾಸಂಸ್ಥೆಗಳ ಪಾತ್ರ ಬಹಳ ಮುಖ್ಯವಾದದ್ದು, ಜಾತ್ಯಾತೀತವಾಗಿ ಎಲ್ಲಾ ಧರ್ಮ ಸಮುದಾಯದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುತ್ತಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು. ಮೈಸೂರು ಪ್ರಾಂತ್ಯ ಕ್ರೈಸ್ತ ವಿದ್ಯಾಸಂಸ್ಥೆಗಳ ಕಾರ್ಯದರ್ಶಿ ವಿಜಯ್ ಕುಮಾರ್ ಮಾತನಾಡಿ ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಮನೆ ವಿದ್ಯಾ ಸಂಸ್ಥೆ ಮತ್ತು ಸಾಮಾಜಿಕ ಜಾಲತಾಣ ಬಹು ಮುಖ್ಯ ಪಾತ್ರ ವಹಿಸುತ್ತದೆ. ಈ ನಿಟ್ಟಿನಲ್ಲಿ ಮನೆ ಮತ್ತು ವಿದ್ಯಾ ಸಂಸ್ಥೆಗಳಲ್ಲಿ ಪೋಷಕರು ಮತ್ತು ಶಿಕ್ಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದರ ಜೊತೆಗೆ ಸಾಮಾಜಿಕ ಜಾಲತಾಣಗಳ ಮೇಲು ನಿಗಬಹಿಸಬೇಕು. ಆದಷ್ಟು ಮಕ್ಕಳನ್ನು ಮೊಬೈಲ್ ಚಟದಿಂದ ದೂರ ಇಡಬೇಕು. ಈ ನಿಟ್ಟಿನಲ್ಲಿ ಪೋಷಕರು ಶಿಕ್ಷಣ ಸಂಸ್ಥೆಯ ಜೊತೆ ಸಹಕರಿಸಬೇಕು ಎಂದು ಕಿವಿ ಮಾತು ಹೇಳಿದರು. ಇದೇ ವೇಳೆ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ವಿವಿಧ ಜನಪದ ಗೀತೆಗಳು ನೃತ್ಯ ಪ್ರದರ್ಶನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ವಿದ್ಯಾ ಸಂಸ್ಥೆ ಆವರಣದಲ್ಲಿ ಸುಮಾರು 3 ಸಾವಿರಕ್ಕೂ ಹೆಚ್ಚು ಜನ ಮಕ್ಕಳ ಪ್ರತಿಮೆ ಕಂಡು ಸಂಭ್ರಮಿಸಿದರು.ಮೈಸೂರು – ಪ್ರಾಂತೀಯ ಧರ್ಮಾಧ್ಯಕ್ಷರಾದ ಕೆ.ಎ.ಎಲ್ಲಿಯಂ, ಕ್ರಿಸ್ತರಾಜ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ಫಾದರ್ ರೋಷನ್ ಬಾಬು, ಧರ್ಮ ಗುರು ಗಳಾದ ಬರ್ನಾಡ್ ಪ್ರಕಾಶ್, ಮೊದಲೈಮುತ್ತು, ಟೆನ್ನಿಕು ರಿಯನ್, ಸೂಸೈರಾಜ್, ಪ.ಪಂ ಅಧ್ಯಕ್ಷೆ ಚಂದ್ರಮ್ಮ ಶಾಲೆಯ ಶಿಕ್ಷಕರು ಇತರರು ಇದ್ದರು.