ಮಾನವೀಯತೆ ಮೆರೆಗೆ ವೀರಪ್ಪನ್ ಸಹಚರ ಜ್ಞಾನಪ್ರಕಾಶ್ ಬಿಡುಗಡೆ.
ವರದಿ: ಶಾರುಕ್ ಖಾನ್ ಹನೂರು
ಹನೂರು : ದೇಶವೆ ತಿರುಗಿ ನೋಡುವಂತೆ ಮಾಡಿದ ಅರಣ್ಯವನ್ನೆ ಲೂಟಿ ಹೊಡೆದು ಕುಖ್ಯಾತಿ ಪಡೆದಿದ್ದ ವೀರಪ್ಪನ್ ಸಹಚರ ಜ್ಞಾನಪ್ರಕಾಶ್ ಗೆ ಜೀವಾವಧಿ ಶಿಕ್ಷೆಗೆ ಪ್ರಕಟವಾಗಿತ್ತು. ಕಾಡುಗಳ್ಳ ವೀರಪ್ಪನ್ ಸಹಚರ ಜ್ಞಾನಪ್ರಕಾಶ್ ಮೈಸೂರಿನ ಕೇಂದ್ರ ಕಾರಾಗೃಹದಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದು. ಇವರು ಹನೂರು ತಾಲೂಕಿನ ಸಂದನಪಾಳ್ಯ ಗ್ರಾಮದ ನಿವಾಸಿಯಾಗಿದ್ದು, ಜ್ಞಾನಪ್ರಕಾಶ್ (68) ಕಾಡುಗಳ್ಳ ವೀರಪ್ಪನ್ ಮುಖ್ಯ ಸಹಚರಾರಾಗಿದ್ದರು ರಾಜ್ಯವೆ ಬೆಚ್ಚಿ ಬೀಳಿಸುವಂತಹ ಭಯಾನಕವಾದ “ಪಾಲಾರ್ ಬಾಂಬ್ ಸ್ಫೋಟ” ಪ್ರಕರಣದಲ್ಲಿ ಮುಖ್ಯ ಆರೋಪಿಯಾಗಿದ್ದ ಈತನಿಗೆ ನ್ಯಾಯಲಯವು ಗಲ್ಲು ಶಿಕ್ಷೆ ವಿಧಿಸಲಾಗಿತ್ತು. ಇದನ್ನು ಪ್ರಶ್ನಿಸಿ ಕುಟುಂಬದವರು ಸುಪ್ರೀಂ ಕೋರ್ಟ್ ಮೋರೆ ಹೋದರು ಇವರ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಲಯವು 2014 ರಲ್ಲಿ ಗಲ್ಲು ಶಿಕ್ಷೆ ಬದಲಿಸಿ ಜೀವಾವಧಿ ಶಿಕ್ಷೆ ವಿಧಿಸಿತ್ತು.ಇತನಿಗೆ68 ವರ್ಷ ವಯಸ್ಸಾಗಿದ್ದು 29 ವರ್ಷಗಳಿಂದ ಜೈಲಿನಲ್ಲೇ ಜೀವನ ಕಳೆದು , ಮೂರು ವರ್ಷಗಳಿಂದ ಶ್ವಾಸಕೋಶ ಕ್ಯಾನ್ಸರ್ ನಿಂದ ಆರೋಗ್ಯದಲ್ಲಿ ಏರುಪೇರಾಗುತ್ತಿತ್ತು . ಮಾನವೀಯತೆ ಆಧಾರದಲ್ಲಿ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದ್ದರಿಂದ ಚಾಮರಾಜನಗರ ನ್ಯಾಯಾಲಯವು ಇಬ್ಬರಿಂದ ಶೂರಿಟಿ ಪಡೆದು ಸೋಮವಾರ ಜಾಮೀನು ಮಂಜೂರು ಮಾಡಿತ್ತು. ಇಂದು ಬೆಳಗ್ಗೆ ಜಾಮೀನಿನಿಂದ ಬಿಡುಗಡೆಯಾಗಿದ್ದು, ಸಂದನಪಾಳ್ಯದಲ್ಲಿರುವ ಅವರ ಕುಟುಂಬವು ಸಂತೋಷದಿಂದ ಬರಮಾಡಿಕೊಂಡರು.