ಶಾಲ ಕಾಲೇಜು, ಸಿನಿಮಾ ಮಂದಿರ, ಕ್ಲಬ್ ಮತ್ತು ಬಾರ್ ಗಳಲ್ಲಿ ಮಾಸ್ಕ್ ಕಡ್ಡಾಯ
ಬೆಂಗಳೂರು : ಹೊಸ ವರ್ಷದ ಆಚರಣೆಗೆ ರಾತ್ರಿ 1 ಗಂಟೆವರೆಗೆ ಮಾತ್ರ ಅವಕಾಶ.
ಶಾಲಾ ಕಾಲೇಜು, ಥಿಯೇಟರ್, ಕ್ಲಬ್ ಮತ್ತು ಬಾರ್ ಗಳಲ್ಲಿ ಮಾಸ್ಕ್ ಕಡ್ಡಾಯ ಮಾಡಿ ಸರ್ಕಾರ ಆದೇಶಿಸಿದೆ.
ವಿಶ್ವದ ಕೆಲವು ರಾಷ್ಟ್ರಗಳಲ್ಲಿ ಕೋವಿಡ್-19 ಸೋಂಕು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವ ಉದ್ದೇಶದಿಂದ ತಜ್ಞ ರೊಟ್ಟಿಗೆ ಸಚಿವರು ಮತ್ತು ಅಧಿಕಾರಿಗಳು ಸಮಾಲೋಚನೆ ನಡೆಸಿದ ನಂತರ ಈ ತೀರ್ಮಾನ ಕೈಗೊಂಡಿದೆ. ಸಭೆಯ ನಂತರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಕಂದಾಯ ಸಚಿವ ಆರ್. ಅಶೋಕ್, ಹೊಸ ವರ್ಷ ಆಚರಣೆ ಬೆಂಗಳೂರು ಸೇರಿದಂತ ಎಲ್ಲ ನಗರಗಳಲ್ಲಿ ರಾತ್ರಿ ಒಂದು ಗಂಟೆಯವರೆಗೆ ಮಾತ್ರ ಸಂಭ್ರಮಾಚರಣೆಗೆ ಅವಕಾಶ ಮಾಡಿಕೊಡಲಾಗಿದೆ.
ಚೀನಾ ಮತ್ತು ಬೇರೆ ಬೇರೆ ದೇಶದಲ್ಲಿ ಕೋವಿಡ್ ಸೋಂಕಿತ ಸಂಖ್ಯೆ ಹೆಚ್ಚಾಗಿದೆ. ಮುಂಜಾಗ್ರತಾ ಕ್ರಮವಾಗಿ ದೇಶದಲ್ಲೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ರಾಜ್ಯದ ಸಿನಿಮಾ ಥಿಯೇಟರ್ ಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ. ಶಾಲಾ ಕಾಲೇಜುಗಳ ತರಗತಿಯೊಳಗೆ ಎಲ್ಲರೂ ಕಡ್ಡಾಯವಾಗಿ ಮಾಸ್ಕ ಧರಿಸಬೇಕು ಎಂದರು. ವಿಮಾನದಲ್ಲಿ ಬರುವ ಪ್ರಯಾಣಿಕರ ತಪಾಸಣೆಗಾಗಿ ಮಂಗಳೂರಿನ ವೆನ್ ಲಾಕ್ ಮತ್ತು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ವ್ಯವಸ್ಥೆ ಮಾಡಲಾಗಿದೆ. ಪಬ್, ಕ್ಲಬ್, ಬಾರ್, ಶಾಲಾ ಕಾಲೇಜುಗಳಲ್ಲಿ ಮಾಸ್ಕ್ ಕಡ್ಡಾಯದ ಜೊತೆಗೆ ಸ್ಯಾನಿಟೈಸರ್ ಬಳಕೆಯೂ ಕಡ್ಡಾಯ. ರೆಸಾರ್ಟ್ ಗಳಲ್ಲಿ ಕೊರೊನಾ ರೂಲ್ಸ್ ಗಳನ್ನು ಕಡ್ಡಾಯವಾಗಿ ಫಾಲೋ ಮಾಡಬೇಕು. ಬಾರ್ ಸಿಬ್ಬಂದಿ ಮಾತ್ರವಲ್ಲ ಬಾರ್ ಗೆ ಬರೋ ಗ್ರಾಹಕರೂ ಡಬಲ್ ಡೋಸ್ ಹಾಕಿಸಿಕೊಂಡಿರಬೇಕು. ಈ ರೂಲ್ಸ್ ಪಾರ್ಟಿಗಳಿಗೂ ಅನ್ವಯ ಎಂದು ಸಚಿವ ಅಶೋಕ್ ತಿಳಿಸಿದರೂ.