ಧರ್ಮಯುದ್ಧ ಸುದ್ದಿ-ಬಾಗಲಕೋಟೆ: ರಾಜ್ಯದಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ಸಂಘರ್ಷದ ಬೆನ್ನಲ್ಲೇ, ಬಾಗಲಕೋಟೆ ಜಿಲ್ಲೆಯ ಇಳಕಲ್ ಪಟ್ಟಣದ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳು.
6ನೇ ತರಗತಿಯಲ್ಲಿ ಓದುತ್ತಿರುವ ಹಿಜಾಬ್ ಧರಿಸಿರುವ ಒಟ್ಟು ಆರು ವಿದ್ಯಾರ್ಥಿಗಳು ಶಾಲೆಯ ಆವರಣದಲ್ಲಿ ಊಟದ ಸಮಯದಲ್ಲಿ ನಮಾಜ್ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಈ ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ್ಆಂ ಗ್ಲ ಮಾಧ್ಯಮ ಶಾಲೆಯಲ್ಲಿ ಶುಕ್ರವಾರ ಈ ಘಟನೆ ವರದಿಯಾಗಿದೆ. ಶನಿವಾರ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆದ ಬಳಿಕ ಹಿಜಾಬ್ ಬೆನ್ನಲ್ಲೇ ಮತ್ತೊಂದು ರಗಳೆ ಬಾಗಲಕೋಟೆ, ಮಂಗಳೂರಿನ ಶಾಲೆಯಲ್ಲಿ ವಿದ್ಯಾರ್ಥಿಗಳ ‘ನಮಾಜ್’ ವಿಡಿಯೋ ವೈರಲ್ಈ ವಿಚಾರ ಬೆಳಕಿಗೆ ಬಂದಿದೆ. ವಿಡಿಯೋ ವೈರಲ್ ಆದ ತಕ್ಷಣ ಸಾರ್ವಜನಿಕ ಶಿಕ್ಷಣ ಇಲಾಖೆ (ಡಿಪಿಐ)
ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪ್ರಾಥಮಿಕ ವಿಚಾರಣೆ ನಡೆಸಿದರು.
ಶಾಲೆಯಲ್ಲಿ ಊಟದ ವೇಳೆಯಲ್ಲಿ ಪ್ರಾರ್ಥನೆ ಸಲ್ಲಿಸುವ ವಿದ್ಯಾರ್ಥಿಗಳ ಬಗ್ಗೆ ತಮಗೆ ಯಾವುದೇ ಇದರ ಅರಿವಿಲ್ಲ ಎಂದು ಶಾಲೆಯ ಶಿಕ್ಷಕರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಶಾಲೆಯ ಮುಖ್ಯೋಪಾಧ್ಯಾಯ ಹೆಚ್ ವೈ ಕರ್ಕೂರ್, ಶಾಲಾ ಆವರಣದಲ್ಲಿ ನಮಾಜ್ ಮಾಡದಂತೆ ವಿದ್ಯಾರ್ಥಿಗಳಿಗೆ ಮೊದಲೇ ಎಚ್ಚರಿಕೆ ನೀಡಿದ್ದೆ. ಈ ಶಾಲೆಯಲ್ಲಿ 232 ವಿದ್ಯಾರ್ಥಿಗಳು ಓದುತ್ತಿದ್ದಾರೆ. ಶಾಲೆಯ ಶಿಕ್ಷಕರು ಊಟದ ಸಮಯದಲ್ಲಿ ಉಳಿದ ವಿದ್ಯಾರ್ಥಿಗಳಿಗೆ ಊಟ ಬಡಿಸುತ್ತಿದ್ದಾಗ ವಿದ್ಯಾರ್ಥಿಗಳು ಪ್ರಾರ್ಥನೆ ಸಲ್ಲಿಸಿದ್ದಾರೆ.ಆರು ವಿದ್ಯಾರ್ಥಿಗಳು ಸಿಬ್ಬಂದಿ ಅನುಮತಿ ತೆಗೆದುಕೊಂಡಿಲ್ಲ ಅಥವಾ ಶಾಲೆಯ ಆವರಣದಲ್ಲಿ ನಮಾಜ್ ಮಾಡುವ ಬಗ್ಗೆ ನಮಗೆ ತಿಳಿಸಿಲ್ಲ. ಮುಂದೆ ಈ ರೀತಿಯ ಘಟನೆಗಳು ಶಾಲೆಯಲ್ಲಿ ನಡೆಯದಂತೆ ನೋಡಿಕೊಳ್ಳುತ್ತೇವೆ